ಬೀದರ್.. ಸಾರಿಗೆ ಸಂಸ್ಥೆ ಬಸ್ಗಳ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ - stone-pelted on KSRTC buses
🎬 Watch Now: Feature Video
ಸಾರಿಗೆ ಸಂಸ್ಥೆ ನೌಕರರ ಧರಣಿ ನಿರಂತರವಾಗಿದ್ದು, ಈ ವೇಳೆಯಲ್ಲಿ ಈಶಾನ್ಯ ಸಾರಿಗೆ ಸಂಸ್ಥೆ ಕಲಬುರಗಿ ವಿಭಾಗದ ಬಸ್ಗಳಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ನಗರದ ಬರಿದ್ ಶಾಹಿ ಗಾರ್ಡನ್ ಬಳಿ ಕಲಬುರಗಿ ಡಿಪೋದ ಬಸ್ನಲ್ಲಿ 25ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ಕಲ್ಲು ತೂರಾಟ ನಡೆಸಿದ್ದು, ಬಸ್ನ ಹಿಂಬಾಗದ ಗ್ಲಾಸ್ ಪುಡಿ ಪುಡಿಯಾಗಿವೆ. ಸ್ಥಳಕ್ಕೆ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಲು ತೂರಾಟ ಮಾಡಿ ಪರಾರಿಯಾದ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.