ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ವಿದ್ಯಾರ್ಥಿನಿಯರ ಪ್ರತಿಭಟನೆ..
🎬 Watch Now: Feature Video
ಗಂಗಾವತಿ:ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಗ್ರಾಮವೊಂದರಲ್ಲಿ ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಎಸ್ಎಫ್ಐ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಒಂದಿಲ್ಲೊಂದು ಭಾಗದಲ್ಲಿ ನಿತ್ಯ ಮಹಿಳೆ, ಮಕ್ಕಳು ಮತ್ತು ವಿದ್ಯಾರ್ಥಿನಿಗಳ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿವೆ. ಕೂಡಲೇ ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಂಡು ರಕ್ಷಣೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.