ಶೈಕ್ಷಣಿಕ ಪ್ರವಾಸಕ್ಕೆ ಕರೆದುಕೊಂಡು ಹೋಗುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ - STUDENTS PROTEST FOR EDUCATIONAL TOUR
🎬 Watch Now: Feature Video
ಯಾದಗಿರಿ: ಶೈಕ್ಷಣಿಕ ಪ್ರವಾಸಕ್ಕೆ ಕರೆದುಕೊಂಡು ಹೋಗುವಂತೆ ಒತ್ತಾಯಿಸಿ ನಗರದ ಸರ್ಕಿಟ್ ಹೌಸ್ ಸಮೀಪದಲ್ಲಿರುವ ಬಾಲಕರ ವಸತಿ ಶಾಲೆ ವಿದ್ಯಾರ್ಥಿಗಳು ವಸತಿ ನಿಲಯಕ್ಕೆ ಬೀಗ ಹಾಕಿ ಮೌನ ಪ್ರತಿಭಟನೆ ನಡೆಸಿದರು. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ವಸತಿ ಶಾಲೆಯಲ್ಲಿ 150 ವಿದ್ಯಾರ್ಥಿಗಳಿದ್ದು, ಇಲಾಖೆಯು ಶೈಕ್ಷಣಿಕ ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲ. ಇದರಿಂದ ಗತ ಇತಿಹಾಸ ಸಾರುವ ಸ್ಥಳಗಳು ವೀಕ್ಷಣೆ ಮಾಡದಂತಾಗಿದೆ ಎಂದು ಆರೋಪಿಸಿ ಪ್ರತಿಭಟನೆ ಮೂಲಕ ತಮ್ಮ ಅಳಲನ್ನ ತೋಡಿಕೊಂಡರು. ಕೂಡಲೇ ಅಧಿಕಾರಿಗಳು ಪ್ರವಾಸಕ್ಕೆ ಕರೆದುಕೊಂಡು ಹೋಗುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ಪ್ರತಿಭಟನೆ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.