ಧಾರವಾಡ: ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಎಸ್ಯುಸಿಐ ಪ್ರತಿಭಟನೆ - Dharwad protest News
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10496927-743-10496927-1612431552656.jpg)
ಧಾರವಾಡ: ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಎಸ್ಯುಸಿಐ (ಕಮ್ಯುನಿಸ್ಟ್) ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು. ಧಾರವಾಡದ ವಿವೇಕಾನಂದ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ವಿರುದ್ದ ಅಸಮಾಧಾನ ಹೊರಹಾಕಿದರು.