ದೆಹಲಿ ರೈತರ ಹೋರಾಟಕ್ಕೆ ಬೆಂಬಲ: ಶಿವಮೊಗ್ಗದಲ್ಲಿ ಉಪವಾಸ ಸತ್ಯಾಗ್ರಹ - fasting by farmers at Shimoga
🎬 Watch Now: Feature Video
ಶಿವಮೊಗ್ಗ: ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಹೋರಾಟಕ್ಕೆ ಬೆಂಬಲವಾಗಿ ಹಾಗೂ ರೈತ ಹೋರಾಟಗಾರ ದಿವಂಗತ ಎನ್.ಡಿ.ಸುಂದರೇಶ್ ಅವರ ಸ್ಮರಣಾರ್ಥವಾಗಿ ರೈತ ಸಂಘ ಮತ್ತು ಹಸಿರು ಸೇನೆ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದೆ. ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ರೈತರು ನಡೆಸುತ್ತಿರುವ ಉಪನಾಸ ಸತ್ಯಾಗ್ರಹಕ್ಕೆ ಶಿವಮೊಗ್ಗದ ವಿವಿಧ ಪ್ರಗತಿಪರ ಸಂಘಟನೆಗಳು ಸಹ ಬೆಂಬಲ ಸೂಚಿಸಿವೆ.