ಬೈಕ್​ಗೆ ಟ್ಯಾಂಕರ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

By

Published : Feb 12, 2020, 1:04 PM IST

thumbnail
ಬೆಳಗಾವಿ: ಬೈಕ್​ಗೆ ಟ್ಯಾಂಕರ್​ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ನಗರದ ಗ್ಲೋಬ್ ಚಿತ್ರಮಂದಿರ ಬಳಿ ಸಂಭವಿಸಿದೆ. ಜಾಧವ್ ನಗರ ನಿವಾಸಿ ಕಿರಣ್‌ಸಿಂಗ್ ರಜಪೂತ್(48) ಮೃತ ದುರ್ದೈವಿ. ಟ್ಯಾಂಕರ್ ಬೈಕ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಟ್ಯಾಂಕರ್ ಸಮೇತ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಬೆಳಗಾವಿ ದಕ್ಷಿಣ ಸಂಚಾರ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.