ಶಾಲಾ ಆವರಣದಲ್ಲಿ ಬಿಜೆಪಿ ಸಮಾವೇಶಕ್ಕೆ ಅನುಮತಿ... ತಾಲೂಕು ಆಡಳಿತದ ನಿರ್ಧಾರಕ್ಕೆ ಆಕ್ಷೇಪ - yallapur BJP samavesha
🎬 Watch Now: Feature Video
ಕಾರವಾರ: ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಇಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದು, ಸಮಾವೇಶಕ್ಕೆ ಶಾಲಾ ಆವರಣದಲ್ಲಿ ಅನುಮತಿ ನೀಡಿರುವುದು ಆಕ್ಷೇಪಕ್ಕೆ ಕಾರಣವಾಗಿದೆ. ಯಲ್ಲಾಪುರ ಪಟ್ಟಣದ ವೈಟಿಎಸ್ಎಸ್ ಶಾಲಾ ಆವರಣದಲ್ಲಿ ಬಿಜೆಪಿ ಸಮಾವೇಶಕ್ಕೆ ತಾಲೂಕು ಆಡಳಿತ ಅವಕಾಶ ಕಲ್ಪಿಸಿದೆ. ಮೈದಾನದಲ್ಲಿ 11 ಗಂಟೆಗೆ ನಡೆಯುವ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವರಾದ ಬಸವರಾಜ ಬೊಮ್ಮಾಯಿ, ಕೋಟಾ ಶ್ರೀನಿವಾಸ ಪೂಜಾರಿ ಭಾಗಿಯಾಗಲಿದ್ದಾರೆ. ಆದರೆ ಸಮಾವೇಶ ನಡೆಯುವ ಮೈದಾನದ ಪಕ್ಕದಲ್ಲಿಯೇ ಶಾಲೆ ಇದ್ದು, ಮಕ್ಕಳಿಗೆ ತೊಂದರೆ ಆಗುತ್ತಿದೆ ಎಂದು ಗೊತ್ತಿದ್ದರೂ ಇಲ್ಲಿ ಸಮಾವೇಶ ನಡೆಸಲು ತಾಲೂಕು ಆಡಳಿತ ಅವಕಾಶ ಕಲ್ಪಿಸಿದೆ ಎನ್ನಲಾಗಿದೆ.