ಶಿಕ್ಷಕರ ಕ್ಷೇತ್ರದ ಚುನಾವಣೆ: ಜಯ ಗಳಿಸಿದವರು ನಮ್ಮ ಧ್ವನಿಯಾಗಬೇಕು ಎಂದ ಶಿಕ್ಷಕರು - ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ
🎬 Watch Now: Feature Video
ಬೆಂಗಳೂರು: ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜಯ ಗಳಿಸಿದ ಅಭ್ಯರ್ಥಿಗಳು, ಕೊರೊನಾ ಮಹಾಮಾರಿಯಿಂದ ತತ್ತರಿಸಿದ ಶಿಕ್ಷಕರ ಧ್ವನಿಯಾಗಿ ನ್ಯಾಯ ದೊರಕಿಸಿಕೊಡಬೇಕು ಎಂದು ಮತ ಚಲಾವಣೆಗೆ ಬಂದ ಶಿಕ್ಷಕರು ಹೇಳಿದರು. ನಾವು ಹಲವು ವರ್ಷಗಳಿಂದ ಚುನಾವಣೆ ನೋಡುತ್ತಿದ್ದೇವೆ. ಅಭ್ಯರ್ಥಿಗಳು ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ ಹೊರತು ಬೇರೆ ಸಮಯದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.