ಕಾರವಾರ: ಸರಳವಾಗಿ ಶಿಕ್ಷಕರ ದಿನಾಚರಣೆ - ಶಿಕ್ಷಕರ ದಿನಾಚರಣೆ
🎬 Watch Now: Feature Video
ಕಾರವಾರ (ಉತ್ತರ ಕನ್ನಡ): ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಶಿಕ್ಷಕರ ದಿನಾಚರಣೆಯನ್ನ ಸರಳವಾಗಿ ಆಚರಿಸಲಾಯಿತು. ನಗರದ ಹಿಂದೂ ಪ್ರೌಢ ಶಾಲೆಯ ಸಭಾ ಭವನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಮೊಗೇರ್ ಉದ್ಘಾಟಿಸಿದರು. ಕೊವಿಡ್-19 ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಸರಳವಾಗಿ ಹಾಗೂ ಸಾಮಾಜಿಕ ಅಂತರದೊಂದಿಗೆ ಆಯೋಜಿಸಲಾಗಿತ್ತು. ಕೆಲವೇ ಶಿಕ್ಷಕರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು. ಪ್ರಸಕ್ತ ಸಾಲಿನಲ್ಲಿ ಕಾರವಾರ ಶೈಕ್ಷಣಿಕ ಜಿಲ್ಲೆಯಿಂದ ಆಯ್ಕೆಯಾದ 15 ಮಂದಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ಬಳಿಕ ಕಾರವಾರ ತಾಲೂಕಿನಲ್ಲಿ ನಿವೃತ್ತಿ ಹೊಂದಿದ ಶಿಕ್ಷಕರಿಗೂ ಇದೆ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಜಿಲ್ಲಾಧಿಕಾರಿ. ಡಾ. ಕೆ. ಹರೀಶಕುಮಾರ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.