ವಿದ್ಯಾರ್ಥಿ ಜೀವನ ರೂಪುಗೊಳ್ಳುವಲ್ಲಿ ಶಿಕ್ಷಕರು ಪಾತ್ರ ಪ್ರಮುಖ: ತುಮಕೂರು ಡಿಸಿ - ಜಿ್ಲ್ಲಧಿಕಾರಿ ರಾಕೇಶ್ ಕುಮಾರ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8690196-383-8690196-1599305591137.jpg)
ತುಮಕೂರು: ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 133ನೇ ಜನ್ಮ ದಿನಾಚರಣೆ ಮತ್ತು ಶಿಕ್ಷಕರ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್, ಭಾರತ ದೇಶವನ್ನು ಬಲಿಷ್ಠ ದೇಶವನ್ನಾಗಿ ಮಾಡುವ ಉದ್ದೇಶದಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ತಮ್ಮ ಹುಟ್ಟುಹಬ್ಬವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಣೆ ಮಾಡಿದ್ದರು. ಪ್ರತಿಯೊಬ್ಬರ ಜೀವನ ರೂಪುಗೊಳ್ಳುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿರುತ್ತದೆ ಎಂದು ಹೇಳಿದರು.