ರಾಜ್ಯದಲ್ಲಿ ಭಯೋತ್ಪಾದಕ ಸಂಘಟನೆಗಳ ನಿಷೇಧಕ್ಕೆ ಕ್ರಮ: ಸಚಿವ ಜೆ.ಸಿ.ಮಾಧುಸ್ವಾಮಿ - ತುಮಕೂರು ಭಯೋತ್ಪಾದನೆ ಚಟುವಟಿಕೆ ಕುರಿತು ಮಾಧುಸ್ವಾಮಿ ಹೇಳಿಕೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5757405-thumbnail-3x2-madhuway.jpg)
ತುಮಕೂರು: ರಾಜ್ಯದಲ್ಲಿ ಭಯೋತ್ಪಾದನೆ ಚಟುವಟಿಕೆಗಳ ಕುರಿತು ಈಟಿವಿ ಭಾರತದ ಪ್ರತಿನಿಧಿ ಜೊತೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ, ರಾಜ್ಯದಲ್ಲಿ ಸಿಮಿ ಸಂಘಟನೆ ನಿಷೇಧಿಸಿದ ನಂತರ ಇದೇ ರೀತಿಯ ಮೂರು ನಾಲ್ಕು ಸಂಘಟನೆಗಳು ಹುಟ್ಟಿಕೊಂಡಿವೆ. ತನ್ವೀರ್ ಸೇಠ್ ಪ್ರಕರಣ ಸೇರಿದಂತೆ ಇತ್ತೀಚೆಗೆ ಬೆಳಕಿಗೆ ಬಂದ ಕೆಲ ಪ್ರಕರಣಗಳಲ್ಲೂ ಇವುಗಳ ಪಾತ್ರದ ಬಗ್ಗೆ ತಿಳಿದುಬಂದಿದೆ. ಹಾಗಾಗಿ ಇಂಥ ಸಂಘಟನೆಗಳ ನಿಷೇಧಕ್ಕೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ ಶಿವಸೇನೆ ಸಂಸದ ಸಂಜಯ್ ರಾವತ್ ಉದ್ರೇಕಕಾರಿ ಭಾಷಣಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡುತ್ತಿದ್ದಾರೆ, ಅವರನ್ನು ವಶಕ್ಕೆ ತೆಗೆದುಕೊಳ್ಳುವ ಹಕ್ಕು ಪೊಲೀಸರಿಗಿದೆ ಎಂದರು.