ಕೊರೊನಾ ಸೋಂಕಿತರ ಸೇವೆ ಮಾಡುತ್ತಿರುವವರಿಗೆ ಚಪ್ಪಾಳೆಯ ಕೃತಜ್ಞತೆ
🎬 Watch Now: Feature Video
ಕೊಪ್ಪಳ: ಕೊರೊನಾ ಸೋಂಕಿತರ ಸೇವೆ ಮಾಡುತ್ತಿರುವ ವೈದ್ಯರಿಗೆ, ಶುಶ್ರೂಕರಿಗೆ ಹಾಗೂ ಪೌರ ಕಾರ್ಮಿಕರಿಗೆ ಕೊಪ್ಪಳದ ಜನರು ಚಪ್ಪಾಳೆ ತಟ್ಟುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ಮನೆ ಹೊರ ಬಾರದ ಜನರು ಸಂಜೆ 5 ಗಂಟೆಗೆ ತಮ್ಮ ಮನೆಯ ಮಾಳಿಗೆ, ಕಾರಿಡಾರ್ಗಳಲ್ಲಿ ನಿಂತು ಚಪ್ಪಾಳೆ ತಟ್ಟುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಈ ಕುರಿತು ಈಟಿವಿ ಭಾರತದ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ...