ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಟಾಟನೆಗೆ ಸಿಎಂ ಆಗಮನ: ಶಾಸಕ ಅಪ್ಪಚ್ಚು ರಂಜನ್ - multi-specialty hospital launch news kodagu
🎬 Watch Now: Feature Video
ಕೊಡಗು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜನವರಿ 27 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 1.15 ಕ್ಕೆ ಹೆಲಿಕಾಫ್ಟರ್ ಮೂಲಕ ಗಾಲ್ಫ್ ಮೈದಾನಕ್ಕೆ ಆಗಮಿಸಲಿರುವ ಸಿಎಂ, 1.30ಕ್ಕೆ ಮಡಿಕೇರಿಯ ಜಿಲ್ಲಾಸ್ಪತ್ರೆ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು 100 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣವಾಗುತ್ತಿದೆ ಎಂದು ತಿಳಿಸಿದ್ದಾರೆ.