17 ಶಾಸಕರು ರಾಜೀನಾಮೆ ನೀಡಿದ್ದಕ್ಕೇ ಬಿಜೆಪಿಗೆ ಅಧಿಕಾರ.. ರೇಣುಕಾಚಾರ್ಯ ಉಪಕಾರ ಸ್ಮರಣೆ - 17 ಶಾಸಕರು ರಾಜೀನಾಮೆ ನೀಡಿದ್ದರಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದ ರೇಣುಕಾಚಾರ್ಯ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4869518-thumbnail-3x2-megha.jpg)
ದಾವಣಗೆರೆ: ಅನರ್ಹ ಶಾಸಕರ ಬಗ್ಗೆ ಡಿಸಿಎಂ ಲಕ್ಷ್ಮಣ ಸವದಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ, 17 ಶಾಸಕರು ರಾಜೀನಾಮೆ ನೀಡಿದ್ದರ ಹಿನ್ನೆಲೆ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಪುನರುಚ್ಚರಿಸಿದ್ದಾರೆ. ಹೊನ್ನಾಳಿ ತಾಲೂಕಿನ ನೆರೆ ಪೀಡಿತ ಪ್ರದೇಶಗಳ ವೀಕ್ಷಣೆ ವೇಳೆ ಮಾಧ್ಯಮದವರ ಜತೆ ಮಾತನಾಡಿದ ಅವರು, ಅನರ್ಹ ಶಾಸಕರಿಂದ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಅನರ್ಹರ ವಿರುದ್ಧ ಹೇಳಿಕೆ ನೀಡಿದವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.