ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಈ ಕಟ್ಟಡ ನಿರ್ಮಾಣ ಕಾಮಗಾರಿ - latest bangalore news
🎬 Watch Now: Feature Video
ರಾಜ್ಯದಲ್ಲಿ ನಿರ್ಮಾಣ ಹಂತದ ಕಟ್ಟಡಗಳು ಕುಸಿದು ನೂರಾರು ಜನರು ಸಾವನ್ನಪ್ಪಿರುವ ಘಟನೆಗಳು ನಡೆಯುತ್ತಲೇ ಇವೆ. ಆದರೆ, ಈ ಅಪಾಯ ತಪ್ಪಿಸಬೇಕಾದ ಅಧಿಕಾರಿಗಳು ಮಾತ್ರ ಕಟ್ಟಡ ನಿರ್ಮಾಣಕ್ಕೆ ಗುತ್ತಿಗೆದಾರರಿಗೆ ಪರವಾನಗಿ ನೀಡುತ್ತಲೇ ಬಂದಿದ್ದಾರೆ. ಇದೇ ರೀತಿ ಅಪಾಯ ಹಂತದಲ್ಲಿರುವ ಆಸ್ಪತ್ರೆಯ ಮೇಲೆ ಮತ್ತೊಂದು ಕಟ್ಟಡ ನಿರ್ಮಿಸಲು ಹೊರಟಿದ್ದವರಿಗೆ, ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿ ಕಾಮಗಾರಿ ನಿಲ್ಲುವಂತೆ ಮಾಡಿದ್ದರು. ಆದರೀಗ ಕಟ್ಟಡ ನಿರ್ಮಾಣ ಕಾಮಗಾರಿ ಮತ್ತೆ ಅಧಿಕಾರಿಗಳ ಕುಮ್ಮಕ್ಕಿನಿಂದ ಆರಂಭವಾಗಿದ್ದು ಜನರಲ್ಲಿ ಆತಂಕ ಮೂಡಿಸಿದೆ.