ಹೆಚ್ಚಾಗುತ್ತಿದೆ ಸೈಬರ್ ಅಪರಾಧಗಳು: ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಅವಕಾಶ - ಬೆಂಗಳೂರು ಸೈಬರ್ ಕ್ರೈಂ ಠಾಣೆ ಸುದ್ದಿ
🎬 Watch Now: Feature Video
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೈಬರ್ ಪ್ರಕರಣಗಳು ಹೆಚ್ಚಾಗುತ್ತಿವೆ. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸೈಬರ್ ಕ್ರೈಂ ಠಾಣೆಯಿದೆ. ಇಲ್ಲಿ ಸಾರ್ವಜನಿಕರು ಸೈಬರ್ ಅಪರಾಧಗಳಿಗೆ ಸಂಬಂಧಿಸಿದಂತೆ ದೂರು ನೀಡುವ ವ್ಯವಸ್ಥೆ ಪುನರ್ ಆರಂಭಿಸಲಾಗಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಆದೇಶದಂತೆ ಠಾಣೆಯಲ್ಲಿ ದೂರು ನೀಡಲು ಸಾಫ್ಟ್‌ವೇರ್ ಅಪ್ಡೇಟ್ ಮಾಡಲಾಗಿದ್ದು, ದೂರು ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ.