ಅಗ್ನಿ ಆಕಸ್ಮಿಕ: ಹೊತ್ತಿ ಉರಿದ ಅಂಗಡಿ... ವಿಡಿಯೋ - ಅಂಗಡಿಯಲ್ಲಿ ಅಗ್ನಿ ಅವಘಡ ಕೊಪ್ಪಳ ಕೊಪ್ಪಳ ಸುದ್ದಿ
🎬 Watch Now: Feature Video
ಕೊಪ್ಪಳ: ಅಗ್ನಿ ಆಕಸ್ಮಿಕದಿಂದ ಕಿರಾಣಿ ಅಂಗಡಿಗೆ ಬೆಂಕಿ ಹೊತ್ತಿಕೊಂಡು ಅಂಗಡಿ ಭಸ್ಮವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇಗೊಣ್ಣಾಗರ ಗ್ರಾಮದಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಹಿರೇಗೊಣ್ಣಾಗರ ಗ್ರಾಮದ ಶರಣಪ್ಪ ಆಲೂರ ಎಂಬುವರಿಗೆ ಸೇರಿದ ಕಿರಾಣಿ ಅಂಗಡಿ ಇದಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಇನ್ನು ಈ ಸಂಬಂಧ ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.