ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ... ತುಂಡಾದ ರುಂಡ - vijaypura sucied news
🎬 Watch Now: Feature Video
ವಿಜಯಪುರ: ರೈಲಿಗೆ ತಲೆ ಕೊಟ್ಟು ವ್ಯಕ್ತಿವೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ವಜ್ರ ಹನುಮಾನ್ ಬಡಾವಣೆ ಬಳಿ ತಡರಾತ್ರಿ ನಡೆದಿದೆ. ಅಂದಾಜು 35 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭಾನುವಾರ ತಡ ರಾತ್ರಿ ರೈಲಿಗೆ ತಲೆಕೊಟ್ಟಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಮೃತ ವ್ಯಕ್ತಿ ಹೆಸರು ಹಾಗೂ ವಿಳಾಸ ತಿಳಿದು ಬಂದಿಲ್ಲ. ವಿಜಯಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Feb 10, 2020, 12:36 PM IST