ವಿಜಯಪುರ: ಈಜಲು ಹೋಗಿದ್ದ ವ್ಯಕ್ತಿ ಕೆರೆಯಲ್ಲಿ ಶವವಾಗಿ ಪತ್ತೆ - ಬಬಲೇಶ್ವರ ತಾಲೂಕಿನ ಕಾರಜೋಳ ಕೆರೆ
🎬 Watch Now: Feature Video
ವಿಜಯಪುರ: ಈಜಲು ಹೋಗಿದ್ದ ವ್ಯಕ್ತಿಯೊಬ್ಬ ನೀರು ಪಾಲಾದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾರಜೋಳ ಕೆರೆಯಲ್ಲಿ ನಡೆದಿದೆ. ಸಿದ್ದಪ್ಪ ಕಲ್ಲಪ್ಪ ಪೂಜಾರಿ (38) ನೀರು ಪಾಲಾದ ವ್ಯಕ್ತಿ. ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಸಿದ್ದಪ್ಪ, ಇಂದು ಕಾರಜೋಳ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಬಬಲೇಶ್ವರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.