ವಿರೋಧ ಪಕ್ಷದವರಿಗೆ ಕ್ಷೇತ್ರದ ಮತದಾರ ತಕ್ಕ ಉತ್ತರ ನೀಡಿದ್ದಾರೆ: ಸಂಸದ ರಾಘವೇಂದ್ರ - undefined
🎬 Watch Now: Feature Video
ಎರಡು ಸಾರ್ವತ್ರಿಕ ಲೋಕಸಭೆ ಚುನಾವಣೆ ಹಾಗೂ ಒಂದು ಉಪ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ನಾನು ಈ ಚುನಾವಣೆಯಲ್ಲಿ ಒಂದರಿಂದ ಒಂದೂವರೆ ಲಕ್ಷದ ಮತಗಳ ಅಂತರ ದಿಂದ ಗೆಲುವು ಸಾಧಿಸುವ ನಿರೀಕ್ಷೆಯಲ್ಲಿದ್ದೆ. ಆದ್ರೆ 2 ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಗಳಿಸಿದ್ದೇನೆ. ಪ್ರಧಾನಿ ಮೋದಿರವರ ವರ್ಚಸ್ಸು, ಕಾರ್ಯಕರ್ತರ ಶ್ರಮದಿಂದ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದರು. ಇನ್ನೂ ವಿರೋಧ ಪಕ್ಷಗಳ ಬಗ್ಗೆ ನಾನು ಎಂದೂ ಮಾತನಾಡಿಲ್ಲ. ಅವರಿಗೆ ಮತ ಹಾಕುವ ಮೂಲಕ ಜನರೇ ತಕ್ಕ ಉತ್ತರ ನೀಡಿದ್ದಾರೆ ಎಂದರು.