ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನು ಜನರು ಕಟ್ಟುನಿಟ್ಟಾಗಿ ಪಾಲಿಸಬೇಕು: ಎಸ್ಪಿ ಖಡಕ್ ವಾರ್ನಿಂಗ್ - ಲೋಕೇಶ್ ಜಗಲಸಾರ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6520115-thumbnail-3x2-vid.jpg)
ಬಾಗಲಕೋಟೆ: ಕೊರೊನಾ ವೈರಸ್ ಭೀತಿ ಹಿನ್ನೆಲೆ ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿ ಮಾಡಿದರೂ ಕೂಡ ಕೆಲ ಪ್ರದೇಶದಲ್ಲಿ ಸಂತೆ ಸೇರಿದಂತೆ ಗುಂಪು ಗುಂಪಾಗಿ ಸೇರಿಸುವುದು ಸಾಮಾನ್ಯವಾಗಿರುತ್ತದೆ. ಕಂದಾಯ, ಆರೋಗ್ಯ ಹಾಗೂ ಪೊಲೀಸ್ ಇಲಾಖೆ ತೆಗೆದುಕೊಂಡಿರುವ ಕ್ರಮಗಳನ್ನು ಜನರು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲವಾದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಸಾರ ತಿಳಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ತೆಗದುಕೊಂಡಿರುವ ಆದೇಶಗಳನ್ನು ಜನರು ಪಾಲಿಸಬೇಕು ಎಂದು ಮನವಿ ಮಾಡಿಕೊಂಡಿರುವ ಎಸ್.ಪಿ.ಈ ಬಗ್ಗೆ ನಿರ್ಲಕ್ಷ್ಯ ತಾಳಿದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.