ಈಗ್ಯಾಕ್‌ರೀ ಸಿಎಂ ಬದಲಾವಣೆ ಪ್ರಶ್ನೆ, ಅದು ಅಪ್ರಸ್ತುತ: ಕೆಪಿಸಿಸಿ ಅಧ್ಯಕ್ಷ ಗುಂಡೂರಾವ್ - kannada news
🎬 Watch Now: Feature Video
ಹುಬ್ಬಳ್ಳಿ : ಸಿದ್ಧರಾಮಯ್ಯ ಮತ್ತೆ ಸಿಎಂ ಆಗಬೇಕು ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆ ಅಪ್ರಸ್ತುತ. ಸಿಎಂ ಬದಲಾವಣೆ ಪ್ರಶ್ನೆ ಈಗ ಅಪ್ರಸ್ತುತವಾದದ್ದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಅನಗತ್ಯ ಚರ್ಚೆಯಾಗುತ್ತಿದೆ. ಸಿಎಂ ಕುರ್ಚಿ ಬದಲಾವಣೆ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಎಲ್ಲಿಯೂ ಕೂಡ ಇದಕ್ಕೆ ಸಂಬಂಧಿಸಿದ ಯಾವುದೇ ಬೆಳವಣಿಗೆಗಳು ನಡೆದಿಲ್ಲ ಎಂದರು.