ಮೈದುಂಬಿ ಹರಿಯುತ್ತಿರುವ ಮಾರ್ಕೆಂಡೇಯ ನದಿ... ಬೆಳಗಾವಿ ಜಿಲ್ಲಾಡಳಿತದಿಂದ ಹೈ ಅಲರ್ಟ್ - Belagavi latest news
🎬 Watch Now: Feature Video
ಮಹಾರಾಷ್ಟ್ರದಲ್ಲಿ ನಿರಂತರ ಹಾಗೂ ಭಾರಿ ಮಳೆಯ ಪರಿಣಾಮ ಬೆಳಗಾವಿ ಜಿಲ್ಲೆ ಹುಕ್ಕೇರಿ ಸಮೀಪವಿರುವ ಮಾರ್ಕೆಂಡೇಯ ನದಿ ಮೈದುಂಬಿ ಹರಿಯುತ್ತಿದೆ. ತಾಲೂಕಿನ ಸಂಕೇಶ್ವರ ಪಟ್ಟಣದ ಶಂಕರಲಿಂಗ, ಹೊಳೆಮ್ಮಾದೇವಿ ದೇವಸ್ಥಾನ ಜಲಾವೃತಗೊಂಡಿದೆ. ಈ ಹಿನ್ನೆಲೆಯಲ್ಲಿ ಜನರು ಆತಂಕದಲ್ಲಿದ್ದು, ನದಿ ತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.