ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಬದ್ಧ: ಪ್ರಭು ಚವ್ಹಾಣ್ - Bangalore Minister of Animal Husbandry Prabhu Chauhan News
🎬 Watch Now: Feature Video
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ರೈತರ ಮನೆ ಬಾಗಿಲಿಗೆ ಪಶು ಸಂಜೀವಿನಿ ಯೋಜನೆ ಜಾರಿಗೊಳಿಸಿ ಈ ಟಿವಿ ಭಾರತ ಜೊತೆ ಮಾತನಾಡಿದ ಸಚಿವರು ಗೋಹತ್ಯೆ ನಿಷೇಧ ವಿಧೇಯಕವನ್ನು ಸದನಕ್ಕೆ ತರಲಾಗಿದ್ದು, ಕಾನೂನನ್ನು ಜಾರಿ ಮಾಡಿಯೇ ಮಾಡುತ್ತೇವೆ ಎಂದರು. ಇದೇ ವೇಳೆ, ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ರೈತರ ಮನೆ ಬಾಗಿಲಿಗೆ ಪಶು ಸಂಜೀವಿನಿ ಯೋಜನೆ ಜಾರಿಗೆ ತರಲಾಗುತ್ತಿದೆ. ಜಾನುವಾರುಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದೆ ಸ್ಪಂದಿಸಿ ಕಾರ್ಯನಿರ್ವಹಿಸಲಿದೆ ಸೇವೆಯನ್ನು ಇಲಾಖೆಯ ಸಹಾಯವಾಣಿ ಸೇವೆಗಳಿಗೆ ಜಾನುವಾರುಗಳ ರಕ್ಷಣೆಗೆ ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.