ಗ್ರಾಮಕ್ಕೆ ಸರ್ಕಾರಿ ಬಸ್ ಬಿಟ್ಟಿದ್ದಕ್ಕೆ ಅದ್ಧೂರಿಯಾಗಿ ಸ್ವಾಗತ ಮಾಡಿದ ಗ್ರಾಮಸ್ಥರು! - villagers who lavishly welcome
🎬 Watch Now: Feature Video
ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮಕ್ಕೆ ಸರ್ಕಾರಿ ಬಸ್ ಬಿಟ್ಟಿದ್ದಕ್ಕೆ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳಿಂದ ಕೊಟ್ಟೂರಿಗೆ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿನಿತ್ಯ ಬಸ್ ಸಂಚಾರವಿಲ್ಲದೆ ಖಾಸಗಿ ವಾಹನಗಳ ಮೂಲಕ ಸಂಚಾರ ಮಾಡುತ್ತಿದ್ದರು. ಕರ್ನಾಟಕ ರಕ್ಷಣಾ ವೇದಿಕೆಯಿಂದ ಹಲವು ದಿನಗಳಗಳಿಂದ ಬಸ್ ವ್ಯವಸ್ಥೆಗಾಗಿ ಹೋರಾಟ ನಡೆಸಲಾಗಿತ್ತು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಬಸ್ ವ್ಯವಸ್ಥೆ ಮಾಡಿಸಿದ್ದಾರೆ. ಕೆಎಸ್ಆರ್ಟಿಸಿ ಬಸ್ ಬರುತ್ತಿದ್ದಂತೆ ಗ್ರಾಮಸ್ಥರು ಪೂಜೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದರು.