ಕಳ್ಳತನಕ್ಕೆ ವಿಫಲ ಯತ್ನ.. ದೃಶ್ಯ ಸಿಸಿಟಿವಿಯಲ್ಲಿ ಸೆರೆ.. - Haveri News
🎬 Watch Now: Feature Video
ಹಾವೇರಿ:ಮನೆ ಮತ್ತು ಅಂಗಡಿಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಗರದ ಸಿದ್ದನಗೌಡ ಎಂಬುವರ ಮನೆಗೆ ಕಳೆದ ರಾತ್ರಿ ನುಗ್ಗಿದ ಖದೀಮರು ಕಳ್ಳತನಕ್ಕೆ ಯತ್ನಿಸಿದ್ದಾರೆ. ಐದು ಜನ ಖದೀಮರಿರುವ ತಂಡ ಮನೆ ಮತ್ತು ಅಂಗಡಿಗಳಲ್ಲಿ ಕಳ್ಳತನಕ್ಕೆ ಯತ್ನಿಸಿದೆ. ಇನ್ನು, ಸ್ಥಳಕ್ಕೆ ರಾಣೇಬೆನ್ನೂರು ನಗರ ಠಾಣೆ ಪೊಲೀಸರು ಮತ್ತು ಬೆರಳಚ್ಚು ತಜ್ಞರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.