ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ: ಶೆಟ್ಟರ್ - ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ
🎬 Watch Now: Feature Video

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಸಿಎಂಗೆ ಬಿಟ್ಟ ವಿಚಾರ. ಮೂಲ ಬಿಜೆಪಿಗರಿಗೆ ಸಚಿವ ಸ್ಥಾನ ಕೊಟ್ಟಿಲ್ಲ ಅನ್ನುವ ಗೊಂದಲ ಇಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ನಡೆದ ಕೃಷಿ ಮೇಳಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಹೈಕಮಾಂಡ್ ಯಾರಿಗೆ ಸಚಿವ ಸ್ಥಾನ ಕೊಡಬೇಕು ಎಂದು ಹೇಳಿರುವ ಬಗ್ಗೆ ನನಗೆ ಗೊತ್ತಿಲ್ಲ. ಆ ಕುರಿತು ಮಾತಾಡುವುದಿಲ್ಲ. ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಸಚಿವ ಸ್ಥಾನ ಸಿಕ್ಕವರು ಹಾಗೂ ಸಿಗದೆ ಇರುವವರು ಕೂಡ ಖುಷಿಯಾಗಿದ್ದಾರೆ. ನಮ್ಮಲ್ಲಿ ಯಾವುದೇ ಆಂತರಿಕ ಭಿನ್ನಮತವಿಲ್ಲ ಎಂದು ಸ್ಪಷ್ಟಪಡಿಸಿದರು.