ಮಹಿಳೆ ಮೇಲೆ ಹಲ್ಲೆ ಮಾಡಿ ಸರ ಎಗರಿಸಲು ಯತ್ನ.. ಕಳ್ಳನಿಗೆ ಗ್ರಾಮಸ್ಥರಿಂದ ಬಿತ್ತು ಧರ್ಮದೇಟು! - ಚಿಂತಾಮಣಿ ತಾಲೂಕಿನ ಕಾಗತಿ ಗ್ರಾಮ
🎬 Watch Now: Feature Video
ಚಿಕ್ಕಬಳ್ಳಾಪುರ: ಚಾಕುವಿನಿಂದ ಮಹಿಳೆಯ ಮೇಲೆ ಹಲ್ಲೆ ಮಾಡಿ ಸರವನ್ನು ಕದ್ದು ಪರಾರಿಯಾಗಲು ಯತ್ನಿಸಿದ ಕಳ್ಳನಿಗೆ ಗ್ರಾಮಸ್ಥರೇ ಹಿಡಿದು ಧರ್ಮದೇಟು ನೀಡಿದ ಘಟನೆ ಚಿಂತಾಮಣಿ ತಾಲೂಕಿನ ಕಾಗತಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನ ಚಂದ್ರಘಾಟ್ ನಿವಾಸಿ ಸೈಯದ್ ದಸ್ತಗಿರಿ ಸರಗಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದ ಆರೋಪಿ. ಕಾಗತಿ ಗ್ರಾಮದ ಧನಲಕ್ಷ್ಮಿ ಎಂಬ ಮಹಿಳೆ ಮುಂಜಾನೆ ಕಸವನ್ನ ತಿಪ್ಪೆಗೆ ಹಾಕಿ ಮನೆಗೆ ವಾಪಸಾಗುತ್ತಿದ್ದ ವೇಳೆ ದ್ವಿಚಕ್ರವಾಹನದಲ್ಲಿ ಬಂದ ಕಳ್ಳ, ಚಾಕು ತೋರಿಸಿ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಮಾಂಗಲ್ಯ ಸರ ಕಸಿದು ಪರಾರಿಯಾಗಲು ಯತ್ನಿಸಿದಾಗ, ಮಹಿಳೆ ಜೋರಾಗಿ ಕಿರುಚಿಕೊಂಡಿದ್ದಾಳೆ. ಈ ಕಿರುಚಾಟ ಕೇಳಿಸಿಕೊಂಡ ಗ್ರಾಮಸ್ಥರು ಕಳ್ಳನನ್ನು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಆರೋಪಿಯನ್ನು ವಶಪಡಿಸಿಕೊಂಡ ಚಿಂತಾಮಣಿ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಮಹಿಳೆ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.