ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಮೂರು ಸೇತುವೆಗಳು ಸಂಚಾರಕ್ಕೆ ಮುಕ್ತ - ಬೆಳಗಾವಿ ಸುದ್ದಿ
🎬 Watch Now: Feature Video
ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದಲ್ಲಿ ಮಳೆಯ ಪ್ರಭಾವ ಕಡಿಮೆಯಾಗಿದ್ದು, ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಮಳುಗಡೆಯಾಗಿದ್ದ 11 ಸೇತುವೆಗಳ ಪೈಕಿ ಮೂರು ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ. ರಾಯಬಾಗ ತಾಲೂಕಿನ ಚಿಂಚಲಿ-ರಾಯಭಾಗ, ಚಿಕ್ಕೋಡಿ ತಾಲೂಕಿನ ಸದಲಗಾ ಬೋರಗಾಂವ ಹಾಗೂ ದಾನವಾಡ ಯಕ್ಸಂಬಾ ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ. ಮಹಾರಾಷ್ಟ್ರದಲ್ಲಿ ಹಾಗೂ ಚಿಕ್ಕೋಡಿ ಉಪವಿಭಾಗದಲ್ಲಿ ಮಳೆ ಕಡಿಮೆಯಾದ್ದರಿಂದ ನದಿ ನೀರಿನ ಪ್ರಮಾಣದಲ್ಲೂ ಸಹ ಭಾರಿ ಇಳಿಕೆಯಾಗಿದೆ. ಸದ್ಯ ಕೃಷ್ಣಾ ನದಿಯಲ್ಲಿ 1,45,000 ಕ್ಯುಸೆಕ್‌ಗಿಂತ ಹೆಚ್ಚು ಒಳಹರಿವಿದೆ.