ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ!
🎬 Watch Now: Feature Video
ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೋಲಾರದ ಆಂಧ್ರ ಗಡಿ ಭಾಗದ ಪಿಚ್ಚಗುಂಟ್ಲಹಳ್ಳಿಯಲ್ಲಿ ನಡೆದಿದೆ. ಜಮೀನಿನ ವಿಚಾರವಾಗಿ ಅದೇ ಗ್ರಾಮದ ನಾರಾಯಣಪ್ಪ ಹಾಗೂ ಆತನ ಮಗ ನರಸಿಂಹ ಎಂಬುವವರು ಗೋಪಾಲಪ್ಪ, ಸತೀಶ್ ಹಾಗೂ ಅವರ ಕುಟುಂಬದ ಮಹಿಳೆಯರನ್ನು ಕೃಷಿ ಸಲಕರಣೆಗಳಿಂದ ಮನಬಂದಂತೆ ಮಾರಣಾಂತಿಕವಾಗಿ ಥಳಿಸಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ಮೂವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Last Updated : Oct 9, 2019, 7:09 PM IST