ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ: ಬೆಚ್ಚಿಬಿದ್ದ ವಿರಾಜಪೇಟೆ ಜನ - Tiger attacks cow in Virajpet
🎬 Watch Now: Feature Video
ಕೊಡಗು: ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದಿರುವ ಘಟನೆ ವಿರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾಮದಲ್ಲಿ ನಡೆದಿದೆ. ಕಾರ್ಮಾಡು ಗ್ರಾಮದ ಕೊಟ್ಟಂಗಡ ಮಧು ಮಂಜುನಾಥ್ ಎಂಬುವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಕೂಡಲೇ ಹುಲಿಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.