ಪಾಕ್ ಪರ ಘೋಷಣೆಗೆ ಖಂಡನೆ: ಪಂಜಿನ ಮೆರವಣಿಗೆ ನಡೆಸಿ ಕುಡ್ಲದಲ್ಲಿ ಎಬಿವಿಪಿಯಿಂದ ಪ್ರತಿಭಟನೆ - ಉಜಿರೆಯಲ್ಲಿ ಪಾಕಿಸ್ತಾನ ಪರ ಘೋಷಣೆ
🎬 Watch Now: Feature Video
ಗ್ರಾಮ ಪಂಚಾಯತ್ ಚುನಾವಣೆ ಸಂಭ್ರಮಾಚರಣೆ ಸಂದರ್ಭದಲ್ಲಿ ಉಜಿರೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಕೃತ್ಯವನ್ನು ಖಂಡಿಸಿ ಎಬಿವಿಪಿ ಪಂಜಿನ ಮೆರವಣಿಗೆ ನಡೆಸಿತು. ಮಂಗಳೂರು ನಗರದ ಬಲ್ಮಠದ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿ ಎಬಿವಿಪಿ ಕಾರ್ಯಕರ್ತರು ಪಂಜು ಹಿಡಿದು ಪ್ರತಿಭಟನೆ ನಡೆಸಿದರು. ಪಂಜು ಹಿಡಿದು ಪ್ರತಿಭಟಿಸಿದ ಎಬಿವಿಪಿ ಕಾರ್ಯಕರ್ತರು, ಪಾಕ್ ಪರ ಘೋಷಣೆ ಕೂಗಿರುವ ಎಸ್ಡಿಪಿಐ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿದರು. ಅಲ್ಲದೆ ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಧಿಕ್ಕಾರ ಕೂಗಿದರು.