ಕ್ರಾಂತಿಕಾರಿ ತ್ರಿವಳಿ ದೇಶಭಕ್ತರ ಬಲಿದಾನದ ಸ್ಮರಣೆ: ಪಂಜಿನ ಮೆರವಣಿಗೆ - ಭಗತ್ ಸಿಂಗ್
🎬 Watch Now: Feature Video
ಪುತ್ತೂರು: ಕ್ರಾಂತಿಕಾರಿ ತ್ರಿವಳಿ ದೇಶಭಕ್ತರಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಬಲಿದಾನದ ಸ್ಮರಣೆ ನಿಮಿತ್ತವಾಗಿ ಬಿಜೆಪಿ ಯುವ ಮೋರ್ಚಾ ನಗರ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲದ ವತಿಯಿಂದ ಪಂಜಿನ ಮೆರವಣಿಗೆ ನಡೆಸಿದೆ. ರಾತ್ರಿ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹೊರಟ ಪಂಜಿನ ಮೆರವಣಿಗೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ದೀಪ ಉರಿಸಿ ಚಾಲನೆ ನೀಡಿದರು. ಬಳಿಕ ಮೆರವಣಿಗೆಯು ಮುಖ್ಯ ರಸ್ತೆ, ಕೋರ್ಟ್ ರಸ್ತೆಯ ಮೂಲಕ ಸಾಗಿ ಅಮರ್ ಜವಾನ್ ಜ್ಯೋತಿ ಬಳಿ ಸಮಾಪ್ತಿಗೊಂಡಿತು.