thumbnail

By

Published : May 12, 2020, 11:21 PM IST

ETV Bharat / Videos

ಕಲ್ಪತರು ನಾಡಲ್ಲಿ 1885 ಮಂದಿ ಕ್ವಾರಂಟೈನ್

ತುಮಕೂರು: ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆ ಜಿಲ್ಲೆಯಲ್ಲಿ 1879 ಮಂದಿಯನ್ನು ಕ್ವಾರಂಟೈನ್​ನಲ್ಲಿ ಇಡಲಾಗಿದೆ. 729 ಮಂದಿಯನ್ನು ಶಂಕಿತರೆಂದು ಗುರುತಿಸಿ ಜಿಲ್ಲಾ ಆಸ್ಪತ್ರೆಯಲ್ಲಿ ಐಸೋಲೋಷನ್​ನಲ್ಲಿ ಇರಿಸಲಾಗಿದೆ. ಇದುವರೆಗೂ ಜಿಲ್ಲೆಯಾದ್ಯಂತ 5271 ಜನರ ಸ್ಯಾಂಪಲ್​ಗಳನ್ನು ಪಡೆಯಲಾಗಿದೆ. ಅದ್ರಲ್ಲಿ 4296 ಮಂದಿಯಲ್ಲಿ ನೆಗೆಟಿವ್ ಬಂದಿದೆ. 926 ಮಂದಿಯ ಸ್ಯಾಂಪಲ್​ಗಳ ವರದಿ ಬರಬೇಕಿದೆ. 38 ಜನರ ಸ್ಯಾಂಪಲ್ ವರದಿಯನ್ನು ತಿರಸ್ಕರಿಸಿ ಪುನಃ ಪರೀಕ್ಷೆಗೆ ಕಳುಹಿಸಲಾಗಿದೆ. ಇದುವರೆಗೂ ಜಿಲ್ಲೆಯಲ್ಲಿ 11 ಮಂದಿಯಲ್ಲಿ ಕೋವಿಡ್-19 ಸೋಂಕು ಕಂಡುಬಂದಿದೆ. ಇಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗುಣಮುಖರಾಗಿದ್ದಾರೆ. ಏಳು ಮಂದಿಗೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

For All Latest Updates

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.