ಯಾದಗಿರಿಯಲ್ಲೂ ಟ್ರ್ಯಾಕ್ಟರ್ ಪರೇಡ್... ರೈತರ ಪ್ರತಿಭಟನೆಗೆ ಬೆಂಬಲ

By

Published : Jan 26, 2021, 4:52 PM IST

thumbnail

ಯಾದಗಿರಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಟ್ರ್ಯಾಕ್ಟರ್​​ ಪರೇಡ್​ಗೆ ಯಾದಗಿರಿಯಲ್ಲಿಯೂ ಬೆಂಬಲ ವ್ಯಕ್ತವಾಗಿದೆ. ಟ್ರ್ಯಾಕ್ಟರ್, ಟೆಂಪೋಗಳ ಮೂಲಕ ಪರೇಡ್ ನಡೆಸಿ ಪ್ರತಿಭಟನೆ ನಡೆಸಲಾಯಿತು. ವಡಿಗೇರಾ ಕ್ರಾಸ್​​ನಿಂದ ಸುಭಾಷ್ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಸುಮಾರು ಐವತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳ‌ಲ್ಲಿ ರೈತರು ಪರೇಡ್ ನಡೆಸಿದರು. ಪೊಲೀಸ್ ಬಿಗಿ ಭದ್ರತೆಯಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸುವ ಮೂಲಕ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗೆ ಕಾರ್ಮಿಕ ಮತ್ತು ಆಟೋ ಚಾಲಕರ ಸಂಘಟನೆಗಳು ಬೆಂಬಲ ನೀಡಿದವು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.