thumbnail

By

Published : Feb 1, 2021, 7:17 PM IST

ETV Bharat / Videos

ಗದಗ: ರೈತಪರ ಸಂಘಟನೆಗಳಿಂದ ಟ್ರ್ಯಾಕ್ಟರ್ ರ‍್ಯಾಲಿ

ಗದಗ: ಕೇಂದ್ರ ಸರ್ಕಾರ ಕೃಷಿ ಕಾಯ್ದೆ ಹಿಂಪಡೆಯುವಂತೆ, ರೈತರ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ರೈತರು ಪ್ರತಿಭಟನೆ ನಡೆಸಿದರು. ನೂರಾರು ರೈತರು ಟ್ರ್ಯಾಕ್ಟರ್ ರ‍್ಯಾಲಿ ನಡೆಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಕೋಟೆ ಆಂಜನೇಯ ದೇವಸ್ಥಾನದಿಂದ ತಹಶೀಲ್ದಾರ್​ ಕಚೇರಿವರೆಗೂ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. ಮುಂಡರಗಿಯ ಕೊಪ್ಪಳ ಸರ್ಕಲ್​​ನಲ್ಲಿ ರಸ್ತೆತಡೆ ಮಾಡಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಹೋರಾಟಕ್ಕೆ ಅನೇಕ ರೈತಪರ, ಕನ್ನಡಪರ ಹಾಗೂ ದಲಿತ ಸಂಘಟನೆಗಳು ಸಾಥ್ ನೀಡಿದ್ದವು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.