ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ವಾಹನ ಸಂಚಾರ ಬಂದ್... ಗ್ರೌಂಡ್ ರಿಪೋರ್ಟ್ - Traffic banned at Charmudi Ghat till August 11
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8350048-3-8350048-1596938251644.jpg)
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದ್ದು, ಈ ಮಳೆಗೆ ಮಲೆನಾಡು ಭಾಗದ ಜನರು ಹೈರಾಣಾಗಿದ್ದಾರೆ. ಪ್ರತಿನಿತ್ಯ ಈ ಭಾಗದಲ್ಲಿ ಒಂದಿಲ್ಲೊಂದು ಅವಘಡಗಳು ಸಂಭವಿಸುತ್ತಿವೆ. ಕೊಟ್ಟಿಗೆಹಾರ ಸಮೀಪ ಇರುವ ಚಾರ್ಮಾಡಿ ಘಾಟ್ನಲ್ಲಿ ಆಗಸ್ಟ್ 11ರ ವರೆಗೂ ಸಂಪೂರ್ಣವಾಗಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಬದಲಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಮೂಡಿಗೆರೆ, ಶಿರಾಡಿಘಾಟ್ ರಸ್ತೆ ಮೂಲಕ ಸಾರ್ವಜನಿಕರು ಸಂಚಾರ ಮಾಡುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.