ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹ: ಹೆಂಡತಿ ಮಕ್ಕಳೊಂದಿಗೆ ಸಾರಿಗೆ ಸಿಬ್ಬಂದಿ ಕಾಲ್ನಡಿಗೆ ಜಾಥಾ
🎬 Watch Now: Feature Video
ಬೆಂಗಳೂರು: ರಾಜಧಾನಿಯಲ್ಲಿ ಕಳೆದ ಮೂರು ದಿನಗಳಿಂದ ಸರಣಿ ಪ್ರತಿಭಟನೆಗಳು ನಡೆಯುತ್ತಿವೆ. ಭಾರತ್ ಬಂದ್, ಬಾರುಕೋಲು ಚಳವಳಿ ನಡೆಸಿದ್ದು, ಇದೀಗ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಅನ್ನದಾತರು ನಿರ್ಧಾರ ಮಾಡಿದ್ದಾರೆ. ಐಕ್ಯ ಹೋರಾಟ ಸಮಿತಿಯಿಂದ ವಿಧಾನಸೌಧ ಮುತ್ತಿಗೆಗೆ ನಿರ್ಧರಿಸಿದ್ದು, ಅನ್ನದಾತರ ಜೊತೆಗೆ ಇಂದು ಸಾರಿಗೆ ನೌಕರರ ಪ್ರತಿಭಟನೆ ಕೂಡ ನಡೆಯಲಿದೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಬೃಹತ್ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದ್ದಾರೆ. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಈ ಜಾಥಾ ಆರಂಭವಾಗಲಿದೆ. ಸಾರಿಗೆ ನೌಕರರ ಪ್ರತಿಭಟನೆಗೆ ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಬೆಂಬಲ ನೀಡಿದ್ದಾರೆ.