ತುಮಕೂರು ಜಿಲ್ಲೆಯಲ್ಲಿ 113ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ - ಕಲ್ಪತರು ನಾಡು ತುಮಕೂರು ಜಿಲ್ಲೆ ಕೊರೊನಾ ಪ್ರಕರಣ
🎬 Watch Now: Feature Video

ತುಮಕೂರು: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 113ಕ್ಕೆ ಏರಿಕೆಯಾಗಿದ್ದು, 39 ಮಂದಿ ಈಗಾಗಲೇ ಸಂಪೂರ್ಣ ಗುಣಮುಖರಾಗಿದ್ದಾರೆ. ಇನ್ನೂ 68 ಮಂದಿ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ ಇಬ್ಬರು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದಿದೆ. 10 ವರ್ಷದೊಳಗಿನ ಮೂವರು ಬಾಲಕರು ಸೋಂಕಿಗೆ ಒಳಗಾಗಿದ್ದಾರೆ. ಜಿಲ್ಲಾ ನ್ಯಾಯಾಲಯದಲ್ಲಿ ಮಹಿಳೆಯೊಬ್ಬರಿಗೆ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯವನ್ನು ಸೀಲ್ಡೌನ್ ಮಾಡಲಾಗಿದೆ. ಕೊರೊನಾ ಮಾಹಿತಿ ಕುರಿತಂತೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ..