ಕೃಷಿ ಹೊಂಡದಲ್ಲಿ ಈಜಲು ಹೋದ ಇಬ್ಬರು ಬಾಲಕರ ಸಾವು - ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು
🎬 Watch Now: Feature Video
ಬಳ್ಳಾರಿ: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಜಾಗಟಗೆರೆ ಗ್ರಾಮದ ರಮೇಶ್ (14) ಹಾಗೂ ನವೀನ್ (14) ಮೃತ ಬಾಲಕರು. ಈ ಇಬ್ಬರು ಬಾಲಕರು ಈಜಲೆಂದು ಕೃಷಿ ಹೊಂಡಕ್ಕೆ ಹೋಗಿದ್ದರು. ಈ ವೇಳೆ ಕೃಷಿಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿದ್ದು, ಓರ್ವ ಬಾಲಕನ ಮೃತದೇಹ ಪತ್ತೆಯಾಗಿದೆ. ನವೀನ್ ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ.