ಪುಲ್ವಾಮ ದಾಳಿಗೆ ಎರಡು ವರ್ಷ: ಬಿಜೆಪಿ ರಾಜ್ಯಾಧ್ಯಕ್ಷರಿಂದ ಹುತಾತ್ಮ ಸ್ಮಾರಕದಲ್ಲಿ ನಮನ - manglore news

🎬 Watch Now: Feature Video

thumbnail

By

Published : Feb 14, 2021, 12:14 PM IST

ಮಂಗಳೂರು: ಪುಲ್ವಾಮ ದಾಳಿ ನಡೆದು ಎರಡು ವರ್ಷ ಸಂದ ಹಿನ್ನೆಲೆಯಲ್ಲಿ ಬಿಜೆಪಿ ದ.ಕ. ಜಿಲ್ಲಾಡಳಿತದ ವತಿಯಿಂದ‌ ನಗರದ ಕದ್ರಿಯಲ್ಲಿರುವ ಸರ್ಕ್ಯೂಟ್ ಹೌಸ್ ಬಳಿಯ ಹುತಾತ್ಮರ ಸ್ಮಾರಕದಲ್ಲಿ ದಾಳಿಯಲ್ಲಿ ಪ್ರಾಣತೆತ್ತ ಯೋಧರಿಗೆ ನಮನ ಸಲ್ಲಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​, ಶಾಸಕ ವೇದವ್ಯಾಸ ಕಾಮತ್, ಬಲಿದಾನಗೈದ ಯೋಧರಿಗೆ ಪುಷ್ಪನಮನ ಸಲ್ಲಿಸಿದರು. ನಂತರ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಮಂಗಳೂರು ಮೇಯರ್ ದಿವಾಕರ ಪಾಂಡೇಶ್ವರ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮನಪಾ ಸದಸ್ಯರಾದ ಕದ್ರಿ ಮನೋಹರ ಶೆಟ್ಟಿ, ಪೂರ್ಣಿಮಾ ಭಟ್ ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.