ಕಬ್ಬಿನ ಗದ್ದೆಗೆ ತಗುಲಿದ ಬೆಂಕಿ : ಲಕ್ಷಾಂತರ ರೂ. ಮೌಲ್ಯದ ಬೆಳೆ ನಾಶ - ಕಲಬುರಗಿ ಕಬ್ಬು ಸುದ್ದಿ
🎬 Watch Now: Feature Video

ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಬಹುತೇಕ ಕಬ್ಬು ಸುಟ್ಟು ಕರಕಲಾದ ಘಟನೆ ಚಿತ್ತಾಪುರ ತಾಲೂಕಿನ ಕಂದನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಉಮರ್ ಪಟೇಲ್ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಂದಾಜು 10 ಎಕರೆಯಲ್ಲಿ ಬೆಳೆದು ನಿಂತಿದ್ದ ಕಬ್ಬು, ಬಹುತೇಕವಾಗಿ ಬೆಂಕಿಗೆ ಆಹುತಿಯಾಗಿದೆ. ಲಕ್ಷಾಂತರ ರೂಪಾಯಿ ಹಾನಿಯಾಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಸುಮಾರು ಹೊತ್ತು ಹರಸಾಹಸ ಪಡಬೇಕಾಯಿತು. ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.