ದೆಹಲಿ ಹಿಂಸಾಚಾರ: ಜಿಟಿಬಿ ಆಸ್ಪತ್ರೆಗೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಭೇಟಿ - Delhi Violence news
🎬 Watch Now: Feature Video
ನವದೆಹಲಿ (ಶಹದಾರ): ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಮಂಗಳವಾರ ತಡರಾತ್ರಿ ಇಲ್ಲಿನ ಜಿಟಿಬಿ ಆಸ್ಪತ್ರೆಗೆ ಭೇಟಿ ನೀಡಿ ಹಿಂಸಾಚಾರದಲ್ಲಿ ಗಾಯಗೊಂಡ ಜನರ ಆರೋಗ್ಯ ವಿಚಾರಿಸಿದರು. ಈ ವೇಳೆ ಗಾಯಗೊಂಡವರ ಬಗ್ಗೆ ಆಸ್ಪತ್ರೆಯ ಆಡಳಿತ ಮಂಡಳಿಯಿಂದ ಮಾಹಿತಿ ಪಡೆದರು. 150ಕ್ಕೂ ಹೆಚ್ಚು ಗಾಯಾಳುಗಳನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಅನೇಕರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.