ರಾಜ್ಯ ಸರ್ಕಾರ ಕಾರವಾರಗೆ 500 ಕೋಟಿ ಪರಿಹಾರ ನೀಡಬೇಕು: ದೇಶಪಾಂಡೆ - RV Deshpande
🎬 Watch Now: Feature Video
ರಾಜ್ಯದಲ್ಲಿ ಎಂದೂ ಕಂಡರಿಯದಂತ ಪ್ರವಾಹ ಈ ಭಾರಿ ಸಂಭವಿಸಿದ್ದು, ಕೇಂದ್ರ ಸರ್ಕಾರ ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯಕ್ಕೆ ಕನಿಷ್ಟ 5 ಸಾವಿರ ಕೋಟಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪನವರು ಉತ್ತರ ಕನ್ನಡ ಜಿಲ್ಲೆಗೆ ಕನಿಷ್ಟ 500 ಕೋಟಿ ಪರಿಹಾರ ನೀಡುವಂತೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ. ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಗೊತ್ತಿರುವ ಹಾಗೆ ರಾಜ್ಯದಲ್ಲಿ ಇಂತಹ ಅನಾವೃಷ್ಟಿ ಸಂಭವಿಸಿಲ್ಲ. ಅದೇ ರೀತಿ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಇಂತಹ ಅನಾವೃಷ್ಟಿಯಾಗಿದ್ದನ್ನು ನೋಡಿಲ್ಲ. ನನಗೆ ಸಿಕ್ಕ ಮಾಹಿತಿ ಪ್ರಕಾರ ಪ್ರವಾಹದಿಂದ ಜಿಲ್ಲೆಯಲ್ಲಿ 600ಕ್ಕೂ ಹೆಚ್ಚು ಮನೆಗಳಿಗೆ ಪೂರ್ಣ ಪ್ರಮಾಣದ ಹಾನಿಯಾಗಿದ್ದು,4 ಸಾವಿರಕ್ಕೂ ಹೆಚ್ಚು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಹಾರ ಕೊಡುವುದರ ಜೊತೆಗೆ ಸಮಸ್ಯೆಗಳಿಗೆ ಶಾಸ್ವತ ಪರಿಹಾರ ಕಲ್ಪಿಸಬೇಕಿದೆ ಎಂದರು.