ಬಿಎಸ್ವೈ ಹೊರತುಪಡಿಸಿ ಬೇರಾವ ಸಿಎಂ ಮೀಸಲಾತಿ ಕೊಡುವ ವಿಶ್ವಾಸವಿಲ್ಲ: ವಚನಾನಂದ ಸ್ವಾಮೀಜಿ - ಶ್ರೀ ವಚನಾನಂದ ಸ್ವಾಮೀಜಿ
🎬 Watch Now: Feature Video
ತುಮಕೂರು: ಮುಖ್ಯಮಂತ್ರಿ ಯಡಿಯೂರಪ್ಪ ಹೊರತುಪಡಿಸಿ ಮುಂದಿನ ದಿನಗಳಲ್ಲಿ ಬೇರೆ ಯಾವ ಮುಖ್ಯಮಂತ್ರಿಯೂ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಯನ್ನು ಕೊಡಲಿದ್ದಾರೆ ಎಂಬ ವಿಶ್ವಾಸವಿಲ್ಲ ಎಂದು ಹರಿಹರ ಗುರುಪೀಠದ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ. ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಪ್ರಶ್ನಾತೀತ ನಾಯಕರು ಇಚ್ಛಾಶಕ್ತಿ ಇದೆ, ಅವರು ಮುಂದಿಟ್ಟ ಹೆಜ್ಜೆಯನ್ನು ಹಿಂದಕ್ಕೆ ತೆಗೆಯುವುದಿಲ್ಲ. ಈಗಾಗಲೇ ಪಂಚಮಸಾಲಿ ಸಮುದಾಯಕ್ಕೆ ಪೂರಕವಾದ ಸೌಲಭ್ಯಗಳನ್ನು ಕಲ್ಪಿಸಿ ಕೊಡುವಂತಹ ನಿಟ್ಟಿನಲ್ಲಿ ಮುಂದಾಗಿದ್ದಾರೆ ಎಂದು ತಿಳಿಸಿದರು.
Last Updated : Feb 12, 2021, 5:12 PM IST