ಸಾಂಸ್ಕೃತಿಕ ನಗರಿಯಲ್ಲಿ ಸರಳ ವೈಕುಂಠ ಏಕಾದಶಿ ಸಂಭ್ರಮ - ಮೈಸೂರು ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10000263-thumbnail-3x2-mng.jpg)
ಮೈಸೂರು: ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ವಿವಿಧ ದೇವಾಲಯದಲ್ಲಿ ಸರಳವಾಗಿ ಪೂಜಾ ಪುನಸ್ಕಾರಗಳು ನಡೆದಿವೆ. ಕಲ್ಯಾಣಗಿರಿಯ ಲಕ್ಷ್ಮೀ ವೆಂಕಟೇಶ್ವರ ದೇವಾಲಯದಲ್ಲಿ ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಿಕೊಡಲಾಗಿದ್ದು, ಮುಂಜಾನೆ 5 ಗಂಟೆಯಿಂದ ರಾತ್ರಿ 10ರವರೆಗೆ ದರ್ಶನಕ್ಕೆ ಅವಕಾಶವಿದೆ. ದೇವರ ದರ್ಶನಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ. ಇನ್ನು ಒಂಟಿಕೊಪ್ಪಲಿನ ವೆಂಕಟರಮಣ ದೇವಸ್ಥಾನ, ಜಯನಗರದಲ್ಲಿರುವ ಇಸ್ಕಾನ್ ದೇವಾಲಯ, ಯೋಗನರಸಿಂಹಸ್ವಾಮಿ ದೇವಾಲಯ ಸೇರಿದಂತೆ ಹಲವು ದೇವಾಲಯಗಳಲ್ಲಿ ವೈಕುಂಠ ಏಕಾದಶಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.