ತುಮಕೂರಿನ ಹಲವಾರು ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಸಂಭ್ರಮ - Vaikuntha Ekadashi celebration
🎬 Watch Now: Feature Video

ತುಮಕೂರು: ಕಲ್ಪತರು ನಾಡು ತುಮಕೂರು ಜಿಲ್ಲೆಯ ಬಹುತೇಕ ದೇಗುಲಗಳಲ್ಲಿ ವೈಕುಂಠ ಏಕಾದಶಿ ಹಿನ್ನೆಲೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ತುಮಕೂರು ನಗರದಲ್ಲಿ ಆಳೆತ್ತರದ ಶ್ರೀ ವೆಂಕಟೇಶ್ವರ ಸ್ವಾಮಿ ಮೂರ್ತಿಯ ಪ್ರತಿಕೃತಿಯನ್ನು ಪ್ರತಿಷ್ಠಾಪಿಸಿ ನಮನ ಸಲ್ಲಿಸಲಾಯಿತು. ಅಲ್ಲದೆ ದೇಗುಲಗಳಲ್ಲಿ ವೈಕುಂಠದ ದ್ವಾರವನ್ನು ನಿರ್ಮಿಸಿ ಭಕ್ತರು ಆ ಮೂಲಕ ಪ್ರವೇಶ ಮಾಡಿ ಪುನೀತರಾದರು.