ದೇವೇಗೌಡರ ಮನೆಯಲ್ಲಿ ವಿಶೇಷ; ಸಂಭ್ರಮದಿಂದ ಜರುಗಿದ ವರಮಹಾಲಕ್ಷ್ಮಿ ವ್ರತ..! - ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4090325-thumbnail-3x2-sanju.jpg)
ಕಳೆದ ಒಂದೂವರೆ ತಿಂಗಳಿನಿಂದ ಬಿಡುವಿಲ್ಲದೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಇಂದು ತಮ್ಮ ಪತ್ನಿ ಜೊತೆ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿದರು. ಪದ್ಮನಾಭ ನಗರದಲ್ಲಿರುವ ಅಮೋಘ ನಿವಾಸದಲ್ಲಿ ವರಮಹಾಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ ಸೀರೆ, ಆಭರಣಗಳನ್ನು ತೊಡಿಸಿ, ವಿವಿಧ ಹೂಗಳಿಂದ ದೇವಿಯನ್ನು ಅಲಂಕರಿಸಲಾಗಿತ್ತು. ಈ ಸಂದರ್ಭದಲ್ಲಿ ದೇವೇಗೌಡರು ತಮ್ಮ ಪತ್ನಿ ಚನ್ನಮ್ಮ ಅವರ ಕೈ ಗೆ ಕಂಕಣ ಕಟ್ಟಿದರು. ನಂತರ ದಂಪತಿ ಮಹಾಲಕ್ಷ್ಮಿಗೆ ಆರತಿ ಬೆಳಗುವ ಮೂಲಕ ಪೂಜೆ ನೆರವೇರಿಸಿದರು.