ಮತ್ತೆ ಲಾಕ್‌ಡೌನ್ ಬೇಡ: ವಿವಿಧ ಸಂಘ-ಸಂಸ್ಥೆಗಳಿಂದ ಸರ್ಕಾರಕ್ಕೆ ಮನವಿ - ಬೆಂಗಳೂರು
🎬 Watch Now: Feature Video
ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸಲು ಕೇಂದ್ರ ಸರ್ಕಾರ ಕಳೆದ ವರ್ಷ 60ಕ್ಕೂ ಹೆಚ್ಚು ದಿನಗಳ ಕಾಲ ಲಾಕ್‌ಡೌನ್ ಘೋಷಿಸಿತ್ತು. ಲಾಕ್ಡೌನ್ನಿಂದಾಗಿ ದೇಶದಲ್ಲಿ ಅದೆಷ್ಟೋ ಜನರು ತಮ್ಮ ಕೆಲಸ ಕಳೆದುಕೊಂಡು ಬೀದಿ ಪಾಲಾಗಿದ್ದರು. ಇನ್ನೇನು ಕೋವಿಡ್ ವ್ಯಾಕ್ಸಿನ್ ಬಂತು ಎಲ್ಲವೂ ಮೊದಲಿನಂತೆ ಆಗುತ್ತದೆ ಅಂದುಕೊಳ್ಳುವಷ್ಟರಲ್ಲಿ ಮತ್ತೆ ಕೊರೊನಾ ಎರಡನೇ ಅಲೆ ಅಬ್ಬರಿಸಿದ್ದು, ಜನಸಾಮಾನ್ಯರ ನಿದ್ದೆಗೆಡಿಸಿದೆ. ಈ ನಡುವೆ ಸರ್ಕಾರ ಮತ್ತೆ ಲಾಕ್‌ಡೌನ್ ಮಾಡಬೇಕಾ, ಬೇಡ್ವಾ ಎಂಬುದರ ಆಲೋಚನೆಯಲ್ಲಿದೆ. ಈ ಲಾಕ್‌ಡೌನ್‌ಗೆ ಆಟೋ ಚಾಲಕರ ಸಂಘ, ಜಿಮ್ ಅಸೋಸಿಯೇಷನ್, ಹೋಟೆಲ್ ಮಾಲೀಕರ ಸಂಘ, ಬೀದಿಬದಿ ವ್ಯಾಪಾರಿಗಳ ಸಂಘ, ರಸೆಲ್ ಮಾರ್ಕೆಟ್ ಅಸೋಸಿಯೇಷನ್ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದೆ.