ತನ್ವೀರ್ ಸೇಠ್ ಮೇಲಿನ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ: ವಾಟಾಳ್ ನಾಗರಾಜ್ - latest mysore vatal nagaraj news
🎬 Watch Now: Feature Video
ಮೈಸೂರು: ಶಾಸಕ ತನ್ವೀರ್ ಸೇಠ್ ಮೇಲಿನ ಹಲ್ಲೆ ಪ್ರಕರಣವನ್ನು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಕೃತ್ಯವನ್ನು ಖಂಡಿಸಿದರು. ಇಂದು ಶಾಸಕರ ಮೇಲೆ ಹಲ್ಲೆ ನಡೆದಿದೆ, ನಾಳೆ ಸಚಿವರ ಮೇಲೆ, ನಾಡಿದ್ದು ಸಿಎಂ ಮೇಲೆ ಹಲ್ಲೆ ಆಗುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಹಾಗಾಗಿ ಸರ್ಕಾರ ಎಚ್ಚೆತ್ತುಕೊಳ್ಳಬೇಕೆಂದು ವಾಟಾಳ್ ಆಗ್ರಹಿಸಿದರು.